Mangaluru:
ಕೊಂಕಣಿ ಭವನ ನಿರ್ಮಾಣಕ್ಕಾಗಿ ನಗರದ ಉರ್ವದಲ್ಲಿ 37 ಸೆಂಟ್ಸ್ ಜಾಗ ಮಂಜೂರಾಗಿದೆ. ಒಂದು ವಾರದೊಳಗೆ ಅದರ ಪಹಣಿಪತ್ರ ಲಭ್ಯವಾಗಲಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಭರವಸೆ ನೀಡಿದರು.
ಭಾನುವಾರ ಇಲ್ಲಿ ಆಯೋಜಿಸಿದ್ದ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ 2020ನೇ ಸಾಲಿನ ಗೌರವ ಪ್ರಶಸ್ತಿ ಪ್ರದಾನ ಮತ್ತು ಪುಸ್ತಕ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕೊಂಕಣಿ ಭವನ ನಿರ್ಮಾಣಕ್ಕಾಗಿ ಈ ಹಿಂದೆ ಮಂಜೂರಾಗಿದ್ದ 30 ಸೆಂಟ್ಸ್ ಜಮೀನಿನ ಬಗ್ಗೆ ತಕರಾರು ಕೇಳಿ ಬಂದಿತ್ತು. ಹೀಗಾಗಿ ಅದರ ಸಮೀಪದಲ್ಲೇ ಇರುವ 37 ಸೆಂಟ್ಸ್ ಜಮೀನನ್ನು ಕೊಂಕಣಿ ಭವನಕ್ಕೆ ಮಂಜೂರು ಮಾಡಲಾಗಿದೆ. ಭವನ ನಿರ್ಮಾಣಕ್ಕಾಗಿ ಈಗಾಗಲೇ ₹ 3 ಕೋಟಿ ಬಿಡುಗಡೆಯಾಗಿದೆ. ಶೀಘ್ರದಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿ ಆರಂಭಿಸಲಾಗುವುದು ಎಂದರು.
ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್ ಸಾರ್, ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ರಹೀಂ ಉಚ್ಚಿಲ್, ಮೇಯರ್ ಪ್ರೇಮಾನಂದ ಶೆಟ್ಟಿ, ಕೊಂಕಣಿ ಚಲನಚಿತ್ರ ನಟ, ಸಾಹಿತಿ ಹೆನ್ರಿ ಡಿಸಿಲ್ವಾ ಮಾತನಾಡಿದರು. ಕೊಂಕಣಿ ಅಕಾಡೆಮಿ ಅಧ್ಯಕ್ಷ ಡಾ ಕೆ. ಜಗದೀಶ್ ಪೈ ಅಧ್ಯಕ್ಷತೆ ವಹಿಸಿದ್ದರು.
ಅಕಾಡೆಮಿ ಸದಸ್ಯ ಅರವಿಂದ ಜಿ. ಶೇಟ್ ಸ್ವಾಗತಿಸಿದರು. ರಿಜಿಸ್ಟ್ರಾರ್ ಮನೋಹರ್ ಕಾಮತ್ ವಂದಿಸಿದರು. ಸದಸ್ಯ ಕೆನ್ಯೂಟ್ ಜೀವನ್ ಪಿಂಟೊ ಕಾರ್ಯಕ್ರಮ ನಿರೂಪಿಸಿದರು.
Read more at: https://www.prajavani.net/district/dakshina-kannada/land-sanctioned-konkani-bhavan-mla-kamat-told-853778.html
0 Comments